ಅಭಿಪ್ರಾಯ / ಸಲಹೆಗಳು

ಪಕ್ಷಿನೋಟ

ರಾಷ್ಟ್ರೀಯ ಉಚ್ಛತರ ಶಿಕ್ಷಾ ಅಭಿಯಾನ (ರೂಸಾ)

ರಾಷ್ಟ್ರೀಯ ಉಚ್ಛತರ ಶಿಕ್ಷಾ ಅಭಿಯಾನವು 2013 ರಲ್ಲಿ ಪ್ರಾರಂಭವಾದ ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, ರಾಜ್ಯ ಉನ್ನತ ಶೈಕ್ಷಣಿಕ ಸಂಸ್ಥೆಗಳನ್ನು ಬಲಗೊಳಿಸಲು ಸೂಕ್ತ ಧನಸಹಾಯವನ್ನು ಒದಗಿಸುವ ಗುರಿ ಹೊಂದಿದೆ. ಈ ಧನಸಹಾಯವು ನೇರವಾಗಿ ಕೇಂದ್ರ ಸಚಿವಾಲಯದಿಂದ ರಾಜ್ಯ ಸರ್ಕಾರಗಳ ಮೂಲಕ ಆಯಾ ರಾಜ್ಯ ಉನ್ನತ ಶಿಕ್ಷಣ ಪರಿಷತ್ತನ್ನು ತಲುಪಿ, ನಂತರ ಗುರುತಿಸಲ್ಪಟ್ಟ ಸಂಸ್ಥೆಗಳಿಗೆ ಬಿಡುಗಡೆಯಾಗುತ್ತದೆ. ರಾಜ್ಯಗಳಿಗೆ ಅನುದಾನ ಬಿಡುಗಡೆಯ ಪ್ರಮಾಣವು, ರಾಜ್ಯವು ಉನ್ನತ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ರೂಪಿಸಿರುವ ಉನ್ನತ ಶಿಕ್ಷಣ ಯೋಜನೆಗಳ ಅಂದಾಜು ವೆಚ್ಚವನ್ನು ಸರಿದೂಗಿಸುತ್ತದೆ.

ರಾಷ್ಟ್ರೀಯ ಉಚ್ಛತರ ಶಿಕ್ಷಾ ಅಭಿಯಾನದ ಪ್ರಧಾನ ಉದ್ದೇಶಗಳು:

  • ಯೋಜಿತ ನೀತಿ, ಗುಣಮಟ್ಟ ಮತ್ತು ಮಾನ್ಯತೆಗಳನ್ನು ಕಡ್ಡಾಯವಾಗಿ ಒಳಗೊಳ್ಳುವಂತೆ ನಿಗಾವಹಿಸುವ ಮೂಲಕ ರಾಜ್ಯ ಶಿಕ್ಷಣ ಸಂಸ್ಥೆಗಳ ಗುಣಮಟ್ಟವನ್ನು ಹೆಚ್ಚಿಸುವುದು.
  • ರಾಜ್ಯ ಮಟ್ಟದಲ್ಲಿ ಶೈಕ್ಷಣಿಕ ಯೋಜನೆಗಳನ್ನು ರೂಪಿಸಲು ಮತ್ತು ಜಾರಿಗೊಳಿಸಲು ಅನುಕೂಲವಾಗುವಂತೆ, ಸುಗಮವಾದ ಸಾಂಸ್ಥಿಕ ವ್ಯವಸ್ಥೆಯನ್ನು ನಿರ್ಮಿಸಿ, ಆ ಮೂಲಕ ವಿಶ್ವವಿದ್ಯಾಲಯಗಳಲ್ಲಿ ಪೂರ್ಣ ಸ್ವಾಯತ್ತತೆ ಮತ್ತು ಆಡಳಿತವನ್ನು ಉತ್ತೇಜಿಸಿ, ರಾಜ್ಯ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಸುಧಾರಣೆಗಳನ್ನು ತರುವುದು.
  • ಕಾಲೇಜುಗಳ ಮಾನ್ಯತೆ, ಶೈಕ್ಷಣಿಕ ಮತ್ತು ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸುವುದು.
  • ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಾಕಷ್ಟು ಉತ್ತಮ ಬೋಧಕರಿರುವಂತೆ ನೋಡಿಕೊಳ್ಳುವುದು ಮತ್ತು ವಿದ್ಯಾರ್ಥಿಗಳ ಸಾಮರ್ಥ್ಯ ವೃದ್ಧಿಗೆ ಅವಕಾಶ ಕಲ್ಪಿಸುವುದು.
  • ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಸಂಶೋಧನೆಗಳಲ್ಲಿ ತಮ್ಮನ್ನು ಸಮರ್ಪಿಸಿಕೊಳ್ಳುವಂತಹ ವಾತಾವರಣ ನಿರ್ಮಿಸುವುದು.
  • ಎಲ್ಲರಿಗೂ ಉನ್ನತ ಶಿಕ್ಷಣ ದೊರೆಯುವಂತೆ ಮಾಡಲು ಇರುವ ಸಂಸ್ಥೆಗಳಿಗೆ ಮತ್ತಷ್ಟು ಶಕ್ತಿ ತುಂಬಿ ಹಿಗ್ಗಿಸುವುದು ಮತ್ತು ಹೊಸ ಸಂಸ್ಥೆಗಳನ್ನು ಕಟ್ಟುವುದು.
  • ಪ್ರಾದೇಶಿಕ ಅಸಮತೋಲನವನ್ನು ನೀಗಿಸಲು, ಶಿಕ್ಷಣ ಸೇವೆಯನ್ನು ಪಡೆಯಲಾಗದ ಪ್ರದೇಶಗಳಲ್ಲಿ ಸಂಸ್ಥೆಗಳನ್ನು ಸ್ಥಾಪಿಸುವುದು.
  • ಉನ್ನತ ಶಿಕ್ಷಣದ ನೀತಿಗಳನ್ನು ಬಲಪಡಿಸಿ, ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ, ಮಹಿಳೆಯರಿಗೆ, ವಿಕಲಚೇತನರಿಗೆ ಸಾಕಷ್ಟು ಅವಕಾಶ ಕಲ್ಪಿಸಿಕೊಡುವುದು

ಕರ್ನಾಟಕ ರಾಜ್ಯದಲ್ಲಿ ರೂಸಾ 1.0 ಹಾಗೂ 2.0 ರ ಕಾರ್ಯಕ್ರಮದ ಪ್ರಗತಿ

  • ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದ ರೂಸಾ ಯೋಜನೆಯಡಿಯಲ್ಲಿ ರೂಸಾ 1.0 ಮತ್ತು 2.0 ಎರಡು ಸೇರಿ ಒಟ್ಟು 792 ಕೋಟಿಗಳ ಅನುದಾನ ಶೇ. 60:40 (ಕೇಂದ್ರ:ರಾಜ್ಯ) ಅನುಪಾತದಲ್ಲಿ ಮಂಜೂರಾಗಿದೆ. ಸರ್ಕಾರಿ ಕಾಲೇಜು, ಮಂಡ್ಯ (ಸ್ವಾಯತ್ತ) ಮತ್ತು ಸರ್ಕಾರಿ ವಿಜ್ಞಾನ ಕಾಲೇಜು, ಬೆಂಗಳೂರು ಇವುಗಳನ್ನು ಏಕೀಕೃತ ವಿಶ್ವವಿದ್ಯಾಲಯಗಳಾಗಿ ಉನ್ನತ ದರ್ಜೆಗೆ ಏರಿಸಲು ಹಾಗೂ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ತಜ್ಞರು ಸಿದ್ಧಪಡಿಸಿದ ಅಧಿನಿಯಮಗಳು ಕಾಯಿದೆಗಳಾಗಿವೆ. 
  • ರೂಸಾ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಕಾಲಕಾಲಕ್ಕೆ ಕಾಲೇಜು - ವಿಶ್ವವಿದ್ಯಾಲಯಗಳ ಮುಖ್ಯಸ್ಥರ ಹಾಗೂ ರೂಸಾ ನೋಡಲ್ ಅಧಿಕಾರಿಗಳನ್ನೊಳಗೊಂಡ ಸಭೆಗಳನ್ನು ಕರೆಯಲಾಗುತ್ತದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಮೂರು ಬಾರಿ ದಕ್ಷಿಣ ಭಾರತದ ರಾಜ್ಯಗಳು ಹಾಗೂ ಕೇಂದ್ರ ಆಡಳಿತ ಪ್ರದೇಶಗಳಿಗೆ ಸಂಬಂಧಿಸಿದ ರೂಸಾ ಪರಾಮರ್ಶನ ಸಭೆಗಳನ್ನು ಆಯೋಜಿಸಿದೆ.
  • ರೂಸಾ ಕಾರ್ಯಕ್ರಮದಡಿ ಶೈಕ್ಷಣಿಕ, ಆಡಳಿತಾತ್ಮಕ, ಸಂಲಗ್ನ ಹಾಗೂ ಪರೀಕ್ಷೆಗಳಿಗೆ ಸಂಬಂಧಿಸಿದ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ರೂಸಾ ಅನುದಾನ ಪಡೆದ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸಲಾಗಿದೆ. ಒಟ್ಟಿನಲ್ಲಿ ರೂಸಾ ಕಾರ್ಯಕ್ರಮವು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಲಭ್ಯತೆ, ಸಮಾನತೆ ಮತ್ತು ಗುಣಮಟ್ಟವನ್ನು ವೃದ್ಧಿಸಲು ನೆರವಾಗಿದೆ.

 

ಇತ್ತೀಚಿನ ನವೀಕರಣ​ : 30-09-2021 03:47 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080